Homeಶಿಕ್ಷಣಸಾಧನೆಗೆ ವಯಸ್ಸಿನ ಮಿತಿಯಿಲ್ಲ: ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಶ್ರೀ ಕುನಾಲ್...

ಸಾಧನೆಗೆ ವಯಸ್ಸಿನ ಮಿತಿಯಿಲ್ಲ: ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪದವಿ ಪ್ರದಾನ ಸಮಾರಂಭದಲ್ಲಿ ಶ್ರೀ ಕುನಾಲ್ ಅಭಿಮತ.

ದಾವಣಗೆರೆ, ನವೆಂಬರ್ ೧೪: ನಗರದ ಜೈನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ೨೦೨೬ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಶನಿವಾರ ಕಾಲೇಜಿನ ಆವರಣದಲ್ಲಿ ವಿಜೃಂಭಣೆಯಿAದ ಜರುಗಿತು. ೨೦೨೫-೨೬ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ಣಗೊಳಿಸಿದ ಇಂಜಿನಿಯರಿAಗ್ ಹಾಗೂ ಎಂಬಿಎ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ವಿಶ್ವವಿದ್ಯಾಲಯದ ರ‍್ಯಾಂಕ್ ಮತ್ತು ಚಿನ್ನದ ಪದಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಇ. ರಂಗಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರು ಹಾಗೂ ನಿರ್ದೇಶಕರಾದ ಡಾ. ಗಣೇಶ್ ಡಿ.ಬಿ. ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಗಣ್ಯರು ಹಾಗೂ ಪದವೀಧರ ವಿದ್ಯಾರ್ಥಿಗಳ ಮೆರವಣಿಗೆಯೊಂದಿಗೆ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ನಂತರ ನಾಡಗೀತೆಯನ್ನು ಹಾಡಲಾಯಿತು. ಕಾಲೇಜಿನ ಡೀನ್ ಅಕಾಡೆಮಿಕ್ಸ್ ಡಾ. ಕೆ.ಬಿ. ಪ್ರಕಾಶ್ ಅವರು ಸ್ವಾಗತ ಭಾಷಣ ಮಾಡಿ, ಗಣ್ಯರು, ಪದವೀಧರರು, ಪೋಷಕರು ಹಾಗೂ ಬೋಧಕ ವರ್ಗದವರನ್ನು ಸ್ವಾಗತಿಸಿದರು. ವಿದ್ಯಾರ್ಥಿಗಳ ಸಾಧನೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಉಪನ್ಯಾಸಕರು ಮತ್ತು ಪೋಷಕರ ಪಾತ್ರವನ್ನು ಸ್ಮರಿಸಿದರು.

ನಂತರ ಪ್ರಾಂಶುಪಾಲರಾದ ಡಾ. ಗಣೇಶ್ ಡಿ.ಬಿ. ಅವರು ೨೦೨೫-೨೬ನೇ ಸಾಲಿನ ಶೈಕ್ಷಣಿಕ ವರದಿಯನ್ನು ಮಂಡಿಸಿ, ಒಟ್ಟು ೪೮೫ ವಿದ್ಯಾರ್ಥಿಗಳು ತಾತ್ಕಾಲಿಕ ಪದವಿ ಪ್ರಮಾಣಪತ್ರ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿ ಡಾ. ಬಿ.ಇ. ರಂಗಸ್ವಾಮಿ ಮಾತನಾಡಿ, ಪದವಿ ಪಡೆದ ನಂತರ ಕಲಿಕೆ ಮುಗಿಯುವುದಿಲ್ಲ. ಇಂದಿನ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ಜೀವನಪರ್ಯಂತ ಕಲಿಯುವ ಮನೋಭಾವ ಬೆಳೆಸಿಕೊಳ್ಳುವುದು ಅತ್ಯಗತ್ಯ ಎಂದರು. ಕೃತಕ ಬುದ್ಧಿಮತ್ತೆ, ರೋಬೋಟಿಕ್ಸ್, ಮಷಿನ್ ಲರ್ನಿಂಗ್ ಮತ್ತು ಆಟೊಮೇಷನ್ ತಂತ್ರಜ್ಞಾನಗಳು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳನ್ನು ತರುತ್ತಿವೆ. ಉದ್ಯಮ ೪.೦ ಮತ್ತು ಉದ್ಯಮ ೫.೦ರ ಯುಗದಲ್ಲಿ ಯಂತ್ರಗಳೊAದಿಗೆ ಸ್ಪರ್ಧಿಸುವ ಬದಲು ಅವುಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ವಿಮರ್ಶಾತ್ಮಕ ಚಿಂತನೆ, ಸಮಸ್ಯೆ ಪರಿಹಾರ, ಸೃಜನಶೀಲತೆ, ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಸಹಯೋಗದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಭಾರತವು ೨೦೪೭ರ ವೇಳೆಗೆ ವಿಕಸಿತ ಮತ್ತು ಆತ್ಮನಿರ್ಭರ ರಾಷ್ಟ್ರವಾಗುವ ಗುರಿ ಹೊಂದಿದ್ದು, ಈ ಕನಸನ್ನು ನನಸಾಗಿಸುವಲ್ಲಿ ಇಂದಿನ ಯುವ ಪದವೀಧರರ ಪಾತ್ರ ಮಹತ್ವದ್ದಾಗಿದೆ ಎಂದರು.

ಯುವಕರಿಗೆ ಐದು ಜೀವನ ಸೂತ್ರಗಳನ್ನು ನೀಡಿದ ಅವರು, “ನಿಮ್ಮ ಮಹತ್ವಾಕಾಂಕ್ಷೆಗಳೇ ನಿಮ್ಮ ಸಾಧ್ಯತೆಗಳು, ನಿರಂತರ ಪ್ರಯತ್ನಕ್ಕೆ ಫಲವಿದೆ, ಸಮಸ್ಯೆಯ ಭಾಗವಾಗದೆ ಪರಿಹಾರದ ಭಾಗವಾಗಿ, ಪರಿಶ್ರಮಕ್ಕೆ ಪರ್ಯಾಯವಿಲ್ಲ ಮತ್ತು ನಿಮ್ಮ ಸಾಮರ್ಥ್ಯಕ್ಕೆ ನೀವೇ ಮಿತಿ ವಿಧಿಸಿಕೊಳ್ಳಬೇಡಿ” ಎಂದು ಪ್ರೇರೇಪಿಸಿದರು. ತಂದೆ-ತಾಯಿ, ಗುರುಹಿರಿಯರನ್ನು ಗೌರವಿಸುವುದರ ಜೊತೆಗೆ ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಾಧನೆಗೆ ವಯಸ್ಸಿನ ಮಿತಿಯಿಲ್ಲ: ಶ್ರೀ ಕುನಾಲ್

ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀ ಕುನಾಲ್ ಅವರು, ಜೀವನದಲ್ಲಿ ಸಾಧನೆ ಮಾಡಲು ವಯಸ್ಸಿನ ಮಿತಿಯಿಲ್ಲ ಎಂದು ತಿಳಿಸಿದರು. ತಮ್ಮ ತಾತನವರು ೭೨ನೇ ವಯಸ್ಸಿನಲ್ಲಿ ಈ ಸಂಸ್ಥೆಯನ್ನು ನಿರ್ಮಿಸಿದ ಉದಾಹರಣೆಯನ್ನು ನೀಡಿದ ಅವರು, ಹೊಸ ಕನಸುಗಳನ್ನು ಕಾಣಲು, ಸಾಧನೆ ಮಾಡಲು ಮತ್ತು ಸಮಾಜಕ್ಕೆ ಕೊಡುಗೆ ನೀಡಲು ಎಂದಿಗೂ ಹಿಂಜರಿಯಬಾರದು ಎಂದರು. ಜೀವನದಲ್ಲಿ ಆಧ್ಯಾತ್ಮಿಕತೆ, ಶಿಸ್ತು, ವಿನಯ ಮತ್ತು ಮಾನವೀಯ ಮೌಲ್ಯಗಳನ್ನು ಕಾಪಾಡಿಕೊಳ್ಳುವಂತೆ ಪದವೀಧರರಿಗೆ ಸಲಹೆ ನೀಡಿದರು.

ವಿಶ್ವವಿದ್ಯಾಲಯದ ರ‍್ಯಾಂಕ್‌ಗಳ ಸಾಧನೆ:-
ಸಿವಿಲ್ ಎಂಜಿನಿಯರಿAಗ್ ವಿಭಾಗದ ವಿಶ್ವನಾಥ್ ಎಚ್.ಎಂ. ಅವರು ವಿಶ್ವವಿದ್ಯಾಲಯದಲ್ಲಿ ಪ್ರಥಮ ರ‍್ಯಾಂಕ್ ಪಡೆದು ೧೨ ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ಎಲೆಕ್ಟ್ರಿಕಲ್ ಅಂಡ್ ಎಲೆಕ್ಟ್ರಾನಿಕ್ಸ್ ವಿಭಾಗದ ವಿನಯ್ ಎಸ್.ಬಿ. ಅವರು ಆರನೇ ರ‍್ಯಾಂಕ್ ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಗಣ್ಯರು ಅಭಿನಂದಿಸಿ ಗೌರವಿಸಿದರು.

ಸಮಾರಂಭದ ಪ್ರಮುಖ ಘಟ್ಟವಾಗಿ ಎಲ್ಲಾ ವಿಭಾಗಗಳ ಮುಖ್ಯಸ್ಥರು ತಮ್ಮ ತಮ್ಮ ವಿಭಾಗದ ಪದವೀಧರ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿಗಳು ವೃತ್ತಿಪರ ನೈತಿಕತೆ, ಪ್ರಾಮಾಣಿಕತೆ, ಶಿಸ್ತು ಮತ್ತು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಸಂಕಲ್ಪ ಮಾಡಿದರು.

ಸಂಸ್ಥೆಯ ಐಡಿಯಾ ಲ್ಯಾಬ್, ೭೫ಕ್ಕೂ ಹೆಚ್ಚು ಕೈಗಾರಿಕಾ ಒಪ್ಪಂದಗಳು ಹಾಗೂ ೩೦೦೦ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳ ಜಾಲದ ಸಾಧನೆಗಳನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಡೀನ್ ಟ್ರೈನಿಂಗ್ ಅಂಡ್ ಪ್ಲೇಸ್‌ಮೆಂಟ್ ಡಾ. ಪ್ರಕಾಶ್ ಎಂ. ವಾಲವಲ್ಕರ್ ವಂದನಾರ್ಪಣೆ ಸಲ್ಲಿಸಿದರು. ಪ್ರೊ. ಜಿ.ಸಿ. ದಿವ್ಯ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಸಮಾರಂಭ ಮುಕ್ತಾಯಗೊಂಡಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments