ದಲಿತ ಸಾಹಿತ್ಯ ಪರಿಷತ್ತು ಜುಲೈ 29 ಮತ್ತು 30, 2023 ರಂದು ವಿಜಯಪುರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ಎಚ್.ಟಿ. ಪೋತೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಅರ್ಜುನ ಗೊಳಸಂಗಿ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು.
ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಪೋತೆ ಅವರು ಉತ್ತರ ಕರ್ನಾಟಕದ ಮಹತ್ವದ ಅಂಬೇಡ್ಕರವಾದಿ ಲೇಖಕರಾಗಿದ್ದಾರೆ.