ದಾವಣಗೆರೆ:ಕನ್ನಡ ದೈವಜ್ಞ ಬ್ರಾಹ್ಮಣ ಸಂಘ (ರಿ).ದಾವಣಗೆರೆ. ಇವರಿಂದ 03/12/2023 ರ ಭಾನುವಾರ 10ನೇ ವರ್ಷದ ವಾರ್ಷಿಕ ಮಹಾಸಭೆ ಯನ್ನು ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ರಕ್ತದಾನ ಶಿಬಿರ ಸಾಧಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಗೀತ ಶಿಕ್ಷಕಿ ಶೋಭಾ ರಂಗನಾಥ್ (ರಾಜ್ಯ ಪ್ರಶಸ್ತಿ ಪುರಸ್ಕೃತ) ಅವರನ್ನು ಸನ್ಮಾನಿಸಲಾಯಿತು ಶೇಕಡಾ 80 ಕ್ಕಿಂತ ಹೆಚ್ಚು ಅಂಕ ಪಡೆದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು ಹಾಗೂ ರಕ್ತದಾನ ಶಿಬಿರ ನಡೆಸಲಾಯಿತು. ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ಜಿ ಶೇಟ್ ಉಪಾಧ್ಯಕ್ಷರಾದ ಮಂಜುನಾಥ ಬಿ ಶೇಟ್ ಕಾರ್ಯದರ್ಶಿಯಾದ ರಾಘವೇಂದ್ರ ಎಸ್ ಶೇಟ್ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು , ಹಾಗೂ ರಾಜ್ಯ ಕನ್ನಡ ದೈವಜ್ಞ ಬ್ರಾಹ್ಮಣ ಸಂಘದ ಗೌರವಾಧ್ಯಕ್ಷರಾದ ಜಗನ್ನಾಥ ಮತ್ತು ಅಧ್ಯಕ್ಷರಾದ ಕೃಷ್ಣಮೂರ್ತಿಯವರು ಹಾಜರಿದ್ದರು