Thursday, August 21, 2025
Homeಆಯ್ಕೆ/ನೇಮಕಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಸದಸ್ಯರಾಗಿ ಸಿದ್ದರಾಮಯ್ಯನವರು ನೇಮಕ

ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಸದಸ್ಯರಾಗಿ ಸಿದ್ದರಾಮಯ್ಯನವರು ನೇಮಕ

ಮುಂಬರುವ ಲೋಕಸಭಾ ಚುನಾವಣೆಯ ‘ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ’ಯಲ್ಲಿ ಸಿದ್ದರಾಮಯ್ಯನವರನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿದ್ಧರಾಮಯ್ಯನವರು ಧನ್ವಾಯವಾದಗಳನ್ನು ಹೇಳಿದ್ದಾರೆ.

ನಮ್ಮ ಸರ್ಕಾರದ ‘ಕರ್ನಾಟಕ ಮಾದರಿ’ ಆಡಳಿತ ಇಂದು ಪಕ್ಷಾತೀತವಾಗಿ ದೇಶದ ಜನ ಗುರುತಿಸುತ್ತಿದ್ದಾರೆ. ಪ್ರಣಾಳಿಕೆ ರಚನೆಯಲ್ಲಿ ನನಗೆ ಅವಕಾಶ ನೀಡಿರುವುದು ಈ ‘ಕರ್ನಾಟಕ ಮಾದರಿ ಆಡಳಿತ’ಕ್ಕೆ ಎಐಸಿಸಿ ನೀಡಿರುವ ಗೌರವ ಎಂದು ನಾನು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ.

ಪಕ್ಷದ ಪ್ರಣಾಳಿಕೆ ಎನ್ನುವುದು ಕೇವಲ ಮತದಾರರಿಗೆ ನೀಡುವ ಭರವಸೆಗಳ ಪಟ್ಟಿ ಅಲ್ಲ, ಜನತೆಗೆ ನಾವು ನೀಡುವ ವಚನವಾಗಿದ್ದು ಅದನ್ನು ಅನುಷ್ಠಾನಕ್ಕೆ ತರುವುದು ನಿಜವಾದ ರಾಜಧರ್ಮ ಎಂದು ನಾನು ತಿಳಿದುಕೊಂಡವನು.
ಹಿಂದಿನ ನಮ್ಮ ಸರ್ಕಾರ ‘ಸರ್ವರಿಗೂ ಸಮಪಾಲು – ಸಮಬಾಳು’ ನೀಡುವ ಪ್ರಣಾಳಿಕೆಯಲ್ಲಿನ ಎಲ್ಲ ಭರವಸೆಗಳನ್ನು ಅನುಷ್ಠಾನಗೊಳಿಸಿ ಮಾದರಿ ಆಡಳಿತವನ್ನು ನೀಡಿ ಜನತೆಯ ವಿಶ್ವಾಸಾರ್ಹತೆಯನ್ನು ಗಳಿಸಿದ್ದೆವು. ಅದೇ ಹಾದಿಯಲ್ಲಿ ಈಗಿನ ಸರ್ಕಾರ ಕೂಡಾ ಮುನ್ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ದೇಶದ ಜನತೆ ಕೂಡಾ ಕರ್ನಾಟಕ ಮಾದರಿ ಆಡಳಿತದ ಅನುಕೂಲಗಳನ್ನು ಪಡೆಯುವಂತಾಗಲಿ ಎಂದು ಹಾರೈಸುತ್ತೇನೆ.

ನನ್ನ ಎಲ್ಲ ಯೋಚನೆ-ಯೋಜನೆಗಳಿಗೆ ಪ್ರೋತ್ಸಾಹ ನೀಡಿ ಹುರಿದುಂಬಿಸುತ್ತಿರುವ ಪಕ್ಷದ ಹಿರಿಯರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments