Saturday, December 21, 2024
Homeಶಿಕ್ಷಣರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳ ಕುರಿತು ದುಂಡುಮೇಜಿನ ಸಭೆ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳ ಕುರಿತು ದುಂಡುಮೇಜಿನ ಸಭೆ

ವಿಜಯಪುರ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದ ದರ್ಬಾರ್ ಪದವಿ ಕಾಲೇಜಿನಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳ ಕುರಿತು ದುಂಡುಮೇಜಿನ ಸಭೆಯನ್ನು ಮಾಡಲಾಯಿತು ಸಭೆಯಲ್ಲಿ ನಗರದ ಹಲವಾರು ಪದವಿ ಕಾಲೇಜುಗಳ ಪ್ರಾಂಶುಪಾಲರು ಉಪನ್ಯಾಸಕರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಶೈಕ್ಷಣಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಎಬಿವಿಪಿಯ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೆರಿ ಮಾತನಾಡಿ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ವಿಧ್ಯಾರ್ಥಿ ಸ್ನೇಹಿ ಕಾಲೇಜ ಕ್ಯಾಂಪಸಗಳನ್ನ ನಿರ್ಮಾಣ ಮಾಡುವ ಅವಶ್ಯಕತೆ ಇದೆ, ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯಗಳು ಪೂರಕವಾಗಿ ಕೆಲಸ ಮಾಡಬೇಕು ಹೊರತಾಗಿ ವಿದ್ಯಾರ್ಥಿಗಳಿಗೆ ಮಾರಕವಾಗಿ ಕೆಲಸ ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಪರಿಣಾಮ ಬೀರುತ್ತದೆ ಇದಕ್ಕೆ ತಕ್ಷಣ ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳು ಕುಲಸಚಿವರು ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದರು.

ಎಬಿವಿಪಿಯ ಜಿಲ್ಲಾ ಸಂಚಾಲಕ ಮಂಜುನಾಥ ಹಳ್ಳಿ ಮಾತನಾಡಿ ವಿಶ್ವವಿದ್ಯಾಲಯದ ಸಮಸ್ಯೆಗಳನ್ನ ಬಗೆಹರಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆಯ ಎಲ್ಲಾ ತಾಲೂಕ ಕೇಂದ್ರಗಳಲ್ಲಿ ಹಾಗೂ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆಗೆ ದಿನಾಂಕ 13 ರಂದು ಕರೆ ನೀಡಲಾಗಿದೆ ಎಂದು ತಿಳಿಸಿದರು.
ಈ ಸಭೆಯಲ್ಲಿ ದರ್ಬಾರ ಪದವಿ ಕಾಲೇಜಿನ ಪ್ರಾಚಾರ್ಯರಾದ ಗಿರೀಶ ಮಣೂರ, ಕುಮದ ಬಿನ ಕಾಲೇಜಿನ ಪ್ರಾಚಾರ್ಯರಾದ ವಿನಾಯಕ ಗ್ರಾಮಪುರೋಹಿತ, ಬಿ ಎಸ್ ಬಾಪಗೊಂಡ, ಎಮ್ ಎಸ್ ಜಳಕಿ, ಕವಿತಾ ಬಿರಾದಾರ, ಸಂದೀಪ ಅರಳಗುಂಡಿ, ಅಭಿಷೇಕ ಬಿರಾದಾರ, ರೇಖಾ ಮಾಳಿ, ಶ್ರೀಕಾಂತ ಬಿರಾದಾರ, ಶ್ರವಣಕುಮಾರ, ಸುಲೋಚನಾ ಸೂರ್ಯವಂಶಿ, ಸುಜ್ಞೆತಾ ಕುಲಕರ್ಣಿ, ಪೂಜಾ ವಿರಶೆಟ್ಟ, ಶಿಲ್ಪಾ, ಸ್ನೇಹಾ,ಯೋಗೇಶ, ಇತರರು ಇದ್ದರು.

ದುಂಡು ಮೇಜಿನ ಸಭೆಯಲ್ಲಿ ಚರ್ಚೆಯಾದ ಶೈಕ್ಷಣಿಕ ಸಮಸ್ಯೆಗಳು.
*ವಿಶ್ವವಿದ್ಯಾಲಯ ನೀಡುತ್ತಿರುವ ಫಲಿತಾಂಶದಲ್ಲಿ ಬಹಳಷ್ಟು ಗೊಂದಲಗಳು ಆಗುತ್ತಿವೆ. ಉತ್ತೀರ್ಣವಾದ ವಿದ್ಯಾರ್ಥಿ ಮತ್ತೆ ಫಲಿತಾಂಶವನ್ನು ನೋಡಿದಾಗ ಅನುತೀರ್ಣ ಎಂದು ತೋರಿಸಿದ ಉದಾಹರಣೆಗಳು ಇವೆ.
*ಪರೀಕ್ಷೆಗಳು ನಡೆದ ಎಷ್ಟೋ ತಿಂಗಳುಗಳಾದರೂ ಫಲಿತಾಂಶವನ್ನು ನೀಡುವುದಕ್ಕೆ ಆಗುತ್ತಿಲ್ಲ.
*ವಿಶ್ವವಿದ್ಯಾಲಯದ ಸಹಾಯವಾಣಿಯು ವಿದ್ಯಾರ್ಥಿಗಳ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ.

  • ಬೋಧನಾ ವಿಷಯಗಳ ಕುರಿತು ವಿಶ್ವವಿದ್ಯಾಲಯಕ್ಕೆ ಸ್ಪಷ್ಟನೆ ಇಲ್ಲದೆ ತರಗತಿಗಳನ್ನ ಪ್ರಾರಂಭ ಮಾಡಿದ ಒಂದು ತಿಂಗಳ ನಂತರ ವಿಷಯಗಳನ್ನು ಬದಲಾವಣೆ ಮಾಡಿ ವಿದ್ಯಾರ್ಥಿಗಳಿಗೆ ಗೊಂದಲ ಸೃಷ್ಟಿ ಮಾಡುತ್ತಿದೆ.
    *ವಿಶ್ವವಿದ್ಯಾಲಯಕ್ಕೆ ಅನುದಾನದ ಕೊರತೆಯಿಂದ ವಿದ್ಯಾರ್ಥಿಗಳ ಮೇಲೆ ಬೇರೆ ಮಾರ್ಗಗಳ ಮೂಲಕ ದಂಡ ವಸೂಲಿ ಮಾಡಿ ವಿಶ್ವವಿದ್ಯಾಲಯ ನಡೆಸುವ ಸ್ಥಿತಿಗೆ ತಲುಪಿದೆ.
    *ಅಂಕಪಟ್ಟಿಯ ಶುಲ್ಕವನ್ನು ಕಟ್ಟಿಸಿಕೊಂಡ ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿ ನೀಡದೆ ವಿದ್ಯಾರ್ಥಿ ವೇತನ ಹಾಗೂ ಇನ್ನಿತರ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆ ಮಾಡುತ್ತಿದೆ.
    *ಪರೀಕ್ಷಾ ವೇಳಾಪಟ್ಟಿಯನ್ನು ಪದೇ ಪದೇ ಬದಲಾವಣೆ ಮಾಡಿ ವಿದ್ಯಾರ್ಥಿಗಳಿಗೆ ಯಾವಾಗ ಪರೀಕ್ಷೆ ನಡೆಯುತ್ತದೆಯೋ ಇಲ್ಲವೋ ಎಂಬ ಗೊಂದಲವನ್ನ ಸೃಷ್ಟಿ ಮಾಡುತ್ತಿದೆ.
    *ಪರೀಕ್ಷಾ ಅರ್ಜಿ ಹಾಗೂ ಇನ್ನಿತರ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸರ್ವರ್ ಸಮಸ್ಯೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.
    *ಮರು ಮೌಲ್ಯಮಾಪನದ ಫಲಿತಾಂಶ ನೀಡದೆ ಮುಂದಿನ ಸೆಮೆಸ್ಟರ ಪರೀಕ್ಷೆಯ ಅರ್ಜಿಯನ್ನ ತುಂಬಲು ಕೊನೆಯ ದಿನಾಂಕವನ್ನು ನೀಡಿ ವಿದ್ಯಾರ್ಥಿಗಳಿಗೆ ಗೊಂದಲವನ್ನು ಸೃಷ್ಟಿ ಮಾಡುತ್ತಿದೆ.
RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments