ದಾವಣಗೆರೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಹಿತೈಷಿಗಳು, ಬೆಂಬಲಿಗರೊಂದಿಗೆ ದೀರ್ಘ ಸಮಾಲೋಚನೆ ನಡೆಸಲು ದಿನಾಂಕ 27/02/2024 ರಂದು ಮಂಗಳವಾರ ಬೆಳಿಗ್ಗೆ 11.30 ಕ್ಕೆ ಜಗಳೂರು ಪ್ರವಾಸಿ ಮಂದಿರ, ಮಧ್ಯಾಹ್ನ 3 ಗಂಟೆಗೆ ಹರಪನಹಳ್ಳಿ ಪ್ರವಾಸಿ ಮಂದಿರ ಹಾಗೂ ಸಂಜೆ 6 ಕ್ಕೆ ಹರಿಹರ ಪ್ರವಾಸಿ ಮಂದಿರದಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಬಲ ಆಕಾಂಕ್ಷಿಗಳೂ, ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಔಟ್ ರೀಚ್ ವಿಭಾಗದ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ವಿನಯ್ ಕುಮಾರ್ ಜಿ.ಬಿ. ಕಕ್ಕರಗೊಳ್ಳ ಇವರು ಪಾಲ್ಗೊಂಡು ಲೋಕಸಭಾ ಕ್ಷೇತ್ರದ ಚುನಾವಣಾ ಹಾಗೂ ಹೋಗುಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಈ ಮಹತ್ವದ ಸಭೆಗೆ ಆಯಾ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನಿಗದಿತ ಸಮಯಕ್ಕೆ ಹಾಜರಾಗಿ ಸಭೆ ಯಶಸ್ವಿಗೊಳಿಸುವಂತೆ ವಿನಯ್ ಕುಮಾರ್ ಕೋರಿದ್ದಾರೆ.