Tuesday, February 3, 2026
Homeಆಯ್ಕೆ/ನೇಮಕಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ.ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶರಿಂದ ಪ್ರಮಾಣ ವಚನ ಬೋಧನೆ.

ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ.ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶರಿಂದ ಪ್ರಮಾಣ ವಚನ ಬೋಧನೆ.

ವಿಜಯಪುರ:ಡಿ.24 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘ (ರಿ) ಜಿಲ್ಲಾ ಘಟಕದ ವಿಜಯಪುರದ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ತಾಲೂಕು ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭವು

ಡಿ.24 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಜಿಲ್ಲಾ ಘಟಕ, ವಿಜಯಪುರ ಜಿಲ್ಲಾ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ತಾಲೂಕು ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ -2025ರ ಉದ್ಘಾಟನೆಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸಲಿದ್ದಾರೆ.
ಇದೇ ಸಂದರ್ಭ ಹಿರಿಯ ಪತ್ರಕರ್ತ ಗೋಪಾಲ ನಾಯಕ ರಚಿಸಿದ “ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ನುಡಿಮುತ್ತುಗಳು” ಕೃತಿಯನ್ನು ವಿಜಯಪುರ ಸಂಸದ ರಮೇಶ ಚಂ. ಜಿಗಜಿಣಗಿ ಬಿಡುಗಡೆಗೊಳಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಎಸ್ ಪಾಟೀಲ, ನಗರ ಶಾಸಕ ಬಸನಗೌಡ ಆರ ಪಾಟೀಲ (ಯತ್ನಾಳ) ಆಗಮಿಸಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಶಯ ನುಡಿಗಳನ್ನಾಡಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಜಿ. ಸಿ. ಲೋಕೇಶ ಅವರು ಪ್ರಮಾಣ ವಚನ ಬೋಧನೆಯನ್ನು ಬೋಧಿಸಲಿದ್ದಾರೆ.
ಈ ಸಂದರ್ಭ ಪುಂಡಲೀಕ ಬಾಳೋಜಿ, ಹಣಮಂತ ನಿರಾಣಿ, ಸುನೀಲಗೌಡ ಬಿ. ಪಾಟೀಲ, ಪಿ.ಎಚ್.ಪೂಜಾರ, ಎಂ.ಎಸ್.ಕರಡಿ, ಕನಾನ್ ಅಬ್ದುಲ್ ಹಮೀದ್ ಮುಶ್ರೀಫ ಉಪಸ್ಥಿತರಿರಲಿದ್ದಾರೆ.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ. ಆನಂದ ಕೆ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಭಾಗವಹಿಸಲಿದ್ದಾರೆ.
ಆದ ಕಾರಣ ಎಲ್ಲ ತಾಲೂಕು ಘಟಕದ ಪದಾಧಿಕಾರಿಗಳು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಯಡಳ್ಳಿ, ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಪ್ರಕಾಶ ಬೆಣ್ಣೂರ ಹಾಗೂ ಇತರೆ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments