Wednesday, May 27, 2026
Homeಶಿಕ್ಷಣಮೈಸೂರು ವಿಭಾಗದ ಜಿಲ್ಲೆಗಳ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮೈಸೂರು ವಿಭಾಗದ ಜಿಲ್ಲೆಗಳ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು:ಕನಕಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಬೆಂಗಳೂರು ವತಿಯಿಂದ ಪ್ರತಿ ವರ್ಷ ರಾಜ್ಯದ ಒಂದೊಂದು ಕಂದಾಯ ವಿಭಾಗದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಅಭ್ಯಾಸ ಮಾಡಿ ಸಂಬಂಧಪಟ್ಟ ಪರೀಕ್ಷೆಗಳಲ್ಲಿ ಉನ್ನತ ಅಂಕಗಳನ್ನು ಗಳಿಸಿ ಉತ್ತೀರ್ಣರಾದ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೇರೆಪಿಸುತ್ತಾ ಬರಲಾಗುತ್ತಿದೆ. ಅದೇ ರೀತಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 95 ಅಂಕಗಳು ಮತ್ತು ಅದಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಗಳಿಸಿದ ಹಾಗೂ ಪಿ.ಯು.ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 90 ಅಂಕಗಳು ಮತ್ತು ಅದಕ್ಕಿಂತಲೂ ಹೆಚ್ಚಿನ ಅಂಕಗಳನ್ನು ಗಳಿಸಿದ ಕುರುಬ (ಹಾಲುಮತ/ಕಾಡುಕುರುಬ/ಜೇನುಕುರುಬ) ಸಮಾಜದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮೈಸೂರು ವಿಭಾಗದ ಜಿಲ್ಲೆಗಳಾದ ಮೈಸೂರು, ಮಂಡ್ಯ, ಚಾಮರಾಜನಗರ, – ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವಿದ್ಯಾಭ್ಯಾಸ ಮಾಡಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು. ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ರೂ.5000/- ನಗದು ಪ್ರೋತ್ಸಾಹಧನ ಮತ್ತು ಪ್ರಶಂಸಾ ಪತ್ರ ನೀಡಿ ಪುರಸ್ಕರಿಸಲಾಗುವುದು. ಅಂಕಪಟ್ಟಿಯ ದೃಢೀಕೃತ ನಕಲು ಪ್ರತಿ, ವರ್ಗಾವಣೆ ಪ್ರಮಾಣ ಪತ್ರ (T.C.) ಅಥವಾ ಜಾತಿ ಪ್ರಮಾಣ ಪತ್ರದ (ಪ್ರವರ್ಗ-IIಎ) ದೃಢೀಕೃತ ನಕಲು ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್ ನಕಲು ಪ್ರತಿ ಮತ್ತು ಭಾವಚಿತ್ರದೊಂದಿಗೆ ತಂದೆತಾಯಿ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ವಿದ್ಯಾರ್ಥಿಯು ಗಳಿಸಿದ ಒಟ್ಟು ಅಂಕ, ಶೇಕಡಾವಾರು ಅಂಕ, ವಿದ್ಯಾಭ್ಯಾಸ ಮಾಡಿದ ಶಾಲೆಯ ಹೆಸರು, ವಿಳಾಸ ಮತ್ತು ಜಿಲ್ಲೆ ಮುಂತಾದ. ವಿವರಗಳನ್ನೊಳಗೊಂಡ ಅರ್ಜಿಯನ್ನು (ಅರ್ಜಿ ನಮೂನೆಯನ್ನು ಇದರೊಂದಿಗೆ ಲಗತ್ತಿಸಿದೆ) ದಿನಾಂಕ 08/06/2026 ರ ಒಳಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಸ್ವೀಕೃತಿ ಬಾಕಿ ಮೂಲಕ (Registered Post Acknowledgement Due) ಶ್ರೀ ಟಿ.ಬಿ. ಬಳಗಾವಿ, ಅಧ್ಯಕ್ಷರು, ಕನಕಶ್ರೀ ಚಾರಿಟಬಲ್ ಟ್ರಸ್ಟ್ (ರಿ.), ಕೇರ್/ಆಫ್: ಕನಕಶ್ರೀ ಗೃಹ ನಿರ್ಮಾಣ ಸಹಕಾರ ಸಂಘ, ನಂ.20/31, 6ನೇ ಮುಖ್ಯರಸ್ತೆ, 80 ಅಡಿ ರಸ್ತೆ, ಕೆ.ಹೆಚ್.ಬಿ. ಕಾಲೋನಿ, 1ನೇ ಹಂತ, ಬಸವೇಶ್ವರನಗರ, ಬೆಂಗಳೂರು-560079, ದೂರವಾಣಿ ಸಂಖ್ಯೆ 080-23585684 ಇವರಿಗೆ ಸಲ್ಲಿಸುವುದು.

ಸದರಿ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ದಿನಾಂಕ:14.06.2026 ರಂದು ಭಾನುವಾರ ಮೈಸೂರಿನ ಸಿದ್ಧಾರ್ಥ ನಗರದ ಕನಕ ಸಮುದಾಯ ಭವನದಲ್ಲಿ ನಡೆಸಲಾಗುವುದು. ಆಯ್ಕೆಗೊಳ್ಳುವ ವಿದ್ಯಾರ್ಥಿಗಳಿಗೆ ಆಹ್ವಾನ ಪತ್ರವನ್ನು ಮುಂಚಿತವಾಗಿ ಕಳುಹಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಶ್ರೀ ಪಿ.ಎನ್. ಕೃಷ್ಣಮೂರ್ತಿ, ಕಾರ್ಯದರ್ಶಿ, ಮೊ.ಸಂ. 9483425046, ಎಂ.ಪ್ರಕಾಶ್ ಖಜಾಂಚಿ.9845101696, ಎಂ.ಮಹಾದೇವ ಟ್ರಸ್ಟಿ /ವಾರ್ಮೊಡನ್,.9448514217, ಶ್ರೀ ಸಿ. ಬಸವರಾಜು, ಟ್ರಸ್ಟಿ, ಮೊ.ಸಂ.9448013559, ಶ್ರೀ ಪಿ. ರಂಗಧಾಮಯ್ಯ ಟ್ರಸ್ಟಿ, ಮೊ.ಸಂ.9980804115 ಇವರುಗಳಲ್ಲಿ ಯಾರನ್ನಾದರೂ ಸಂಪರ್ಕಿಸುವುದು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments