Homeಸಾರ್ವಜನಿಕ ಧ್ವನಿಗ್ರಾಮ ಪಂಚಾಯತ ನೌಕರರಿಗೆ ಕನಿಷ್ಠ ವೇತನ ಜಾರಿ ಮತ್ತು ಪ್ರಮುಖ ಬೇಡಿಕೆಗಳನ್ನು ಒತ್ತಾಯಿಸಿ ಡಿಸಿ ಮುಖಾಂತರ...

ಗ್ರಾಮ ಪಂಚಾಯತ ನೌಕರರಿಗೆ ಕನಿಷ್ಠ ವೇತನ ಜಾರಿ ಮತ್ತು ಪ್ರಮುಖ ಬೇಡಿಕೆಗಳನ್ನು ಒತ್ತಾಯಿಸಿ ಡಿಸಿ ಮುಖಾಂತರ ಸಿಎಂ.ಗೆ ಮನವಿ

ದಾವಣಗೆರೆ:ಗ್ರಾಮ ಪಂಚಾಯತ ನೌಕರರಿಗೆ ಕಳೆದ ೭-೮ ವರ್ಷಗಳಿಂದ ವೇತನ ಪರಿಷ್ಕರಣೆ ಆಗದೆ ಇವತ್ತಿನ ಬೆಲೆ ಏರಿಕೆ ದಿನಗಳಲ್ಲಿ ಜೀವನ ನಡೆಸುವುದು ಕಷ್ಟವಾಗಿದೆ. ಈಗ ಸಿಗುತ್ತಿರುವ ವೇತನದಲ್ಲಿ ಮಕ್ಕಳ ಶಿಕ್ಷಣ ಹಾಗೂ ಆರೋಗ್ಯಕ್ಕಾಗಿ ಸಾಕಾಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಸರಕಾರ ದುಡಿಯುವ ಜನರಿಗೆ ಸಹಾಯ ಮಾಡಬೇಕು. ಬೆಲೆ ಏರಿಕೆಗೆ ಅನುಗುಣವಾಗಿ ಮೇ ೨೨, ೨೦೨೬ ರಂದು ಹೊರಡಿಸಿ ಆದೇಶದನ್ವಯ ಕೂಡಲೆ ವೇತನ ಬಿಡುಗಡೆ ಮಾಡಬೇಕು.

೨೨-೦೫-೨೦೨೬ ರಂದು ವೇತನ ನಿಗದಿಪಡಿಸಿ ಹೊರಡಿಸಿದ ಆದೇಶದಿಂದ ಇಡೀ ರಾಜ್ಯದ ದುಡಿಯುವ ಜನತೆ ತುಂಬಾ ಖುಷಿಯಾಗಿ ಕಡೆಗೂ ಕರ್ನಾಟಕ ರಾಜ್ಯ ಸರಕಾರ ಬಡವರಿಗೆ ಸಹಾಯ ಹಸ್ತವಾಗಿ ಒಂದು ವೇತನ ನಿಗದಿಪಡಿಸಿ ಆಸರೆಯಾದರೂ ಎಂದು ಹೇಳುತ್ತಿರುವಾಗಲೆ ಮೇ ೨೨ ರಂದು ಹೊರಡಿಸಿದ ಹೊಸ ವೇತನದ ಆದೇಶವನ್ನು ಸಂಪುಟ ಸಭೆಯಲ್ಲಿ ಪರಿಶೀಲಿಸಬೇಕೆಂದು ಹೇಳಿದಾಗ ಖುಷಿಯಲ್ಲಿರುವಂತಹ ದುಡಿಯುವ ಜನತೆ ತುಂಬಾ ನಿರಾಶೆಯಾಗಿದ್ದಾರೆ “ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ” ಎಂದು ದುಃಖ ತೋಡಿಕೊಳ್ಳುತ್ತಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಸಂಜೀವಿನಿ ಒಕ್ಕೂಟದ ಮೂಲಕ ಪಂಚಾಯತನವರ ತರಬೇತಿಯೊಂದಿಗೆ ಗ್ರಾಮೀಣ ಭಾಗದಲ್ಲಿ ಸ್ವಚ್ಚತಾಗಾರರಾಗಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಛವಾಹಿನಿ ಮಹಿಳಾ ವಾಹನ ಚಾಲಕಿಯರು ಮತ್ತು ಕಸಗುಡಿಸುವ ಮಹಿಳೆಯರು ಸುಮಾರು ೧-೨ ವರ್ಷದಿಂದ ವೇತನ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ತಮ್ಮ ಘನ ಸರ್ಕಾರ ಇವರಿಗೆ ಸಂಜೀವಿನಿ ಒಕ್ಕೂಟದಿಂದ ಬೇರ್ಪಡಿಸಿ ಪಂಚಾಯತ ಮೂಲಕ ವೇತನ ನೀಡಬೇಕೆಂದು ಆಗ್ರಹಿಸುತ್ತೇವೆ.

ಕಳೆದ ೭-೮ ವರ್ಷಗಳಿಂದ ವೇತನ ಪರಿಷ್ಕರಣೆ ಆಗದೆ ಕಷ್ಟದ ದಿನಗಳನ್ನು ಕಳೆಯುತ್ತಿರುವ ಪಂಚಾಯತ ನೌಕರರಿಗೆ ದಿನಾಂಕ: ೨೨-೦೫-೨೦೨೬ ರ ಆದೇಶದನ್ವಯ ವೇತನ ಜಾರಿ ಮಾಡಬೇಕು ಹಾಗೂ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಪ್ರಮುಖ ಈ ಕೆಳಗಿನ ಬೇಡಿಕೆಗಳನ್ನು ಈಡೇರಿಸಬೇಕೆಂದು ವಿನಂತಿಸುತ್ತೇವೆ.
ಬೇಡಿಕೆಗಳು:
೧] ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕರವಸೂಲಿಗಾರ, ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಏಕಕಾಲಕ್ಕೆ ಸರಕಾರಿ ನೌಕರರೆಂದು ಘೋಷಿಸಬೇಕು.
೨] ಸೇವಾ ಹಿರಿತನವನ್ನು ಪರಿಗಣಿಸಿ ಇಕ್ರಿಮೆಂಟ್ ಕೊಡಬೇಕು.
೫ ವರ್ಷ ಸೇವೆ ಸಲ್ಲಿಸಿರುವ ನೌಕರರಿಗೆ ರೂ. ೭೫೦, ೧೦ ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದವರಿಗೆ ರೂ.೧,೫೦೦, ೧೫ ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿದವರಿಗೆ ರೂ. ೩,೦೦೦ ಈ ಕುರಿತು ಈಗಾಗಲೇ ಆರ್ಥಿಕ ಇಲಾಖೆಗೆ ಕಡತ ಹೋಗಿದೆ
೩] ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ನಿವೃತ್ತಿ ಅಥವಾ ಮರಣ ಹೊಂದಿದರೆ, ರೂ. ೬ ಲಕ್ಷ ಇಡಿಗಂಟು ಕೊಡಬೇಕು ಮತ್ತು ಗ್ರಾಮ ಪಂಚಾಯತ್‌ನಲ್ಲಿ ಠರಾವು ಮೂಲಕ ನೇಮಕಾತಿಯಾಗಿರುವ ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತಿಯಿAದ ಅನುಮೋದನೆ ಆಗದೇ ಇದ್ದರು ಅಂತಹ ಸಿಬ್ಬಂದಿಗಳಿಗೂ ಇಡಿಗಂಟು ನೀಡಲು ಆದೇಶ ನೀಡಬೇಕು. (ಆರ್ಥಿಕ ಇಲಾಖೆಗೆ ಕಡತವು ಹೋಗಿದೆ)
೪] ತರಬೇತಿ ಪಡೆದಿರುವ ಎಲ್ಲ ಸ್ವಚ್ಛವಾಹಿನಿ ನೌಕರರಿಗೆ ಕೆಲಸ ನೀಡಬೇಕು, ಒಡಂಬಡಿಕೆ ಪತ್ರ ಮತ್ತು ಪ್ರತಿವರ್ಷದ ನವೀಕರಣ ಪದ್ಧತಿ ರದ್ದುಪಡಿಸಬೇಕು. ೧೫ ನೇ ಹಣಕಾಸಿನಲ್ಲಿ ವೇತನ ಪಾವತಿ ಮಾಡಬೇಕು. ಪ್ರತಿಯೊಂದು ಪಂಚಾಯತಿಗೆ ಒಬ್ಬರೇ ಚಾಲಕರೆಂದು ಪರಿಗಣಿಸಿ ರೂ. ೧೫ ಸಾವಿರ ವೇತನ ನಿಗದಿ ಮಾಡಬೇಕು.
೫] ಗ್ರಾಮ ಪಂಚಾಯತಿಗಳಿಗೆ ಎರಡನೇ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅವಕಾಶ ನೀಡಿದ್ದು ಸ್ವಾಗತ. ಆದರೆ ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ನೇಮಕ ಮಾಡಿಕೊಂಡು ಮುಂದುವರೆಸಬೇಕು. ಅಲ್ಲದೇ ಈಗಾಗಲೇ ಗ್ರಾಮ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುವ ನೌಕರರು ಕಂಪ್ಯೂಟರ್ ಜ್ಞಾನ ಹಾಗೂ ವಿದ್ಯಾರ್ಹತೆ ಹೊಂದಿದ್ದರೆ ಅವರಿಗೆ ಅವಕಾಶ ನೀಡಬೇಕು.
೬] ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳನ್ನು ನಿಗದಿಗೊಳಿಸಬೇಕೆ. ೨೦೧೭ರ ಒಳಗೆ ಇರುವ ಹೆಚ್ಚುವರಿ ಕರವಸೂಲಿಗಾರರಿಗೆ ಅನುಮೋದನೆ ನೀಡಬೇಕು.
೭] ರಾಜ್ಯದಲ್ಲಿ ಮೊದಲನೇ ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಕ್ಲರ್ಕ ಹುದ್ದೆ ತೆರವಾದ ನಂತರ ಅನುಮೋದನೆ ನೀಡಬೇಕೆಂಬ ಷರತ್ತನ್ನು ಕೈಬಿಟ್ಟು ಅನುಮೋದನೆ ನೀಡಲು ಅವಕಾಶ ನೀಡಬೇಕು.
೮] ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಕರ ವಸೂಲಿಗಾರ, ಕ್ಲರ್ಕ ಕಂ ಡಾಟಾ ಎಂಟ್ರಿ ಆಪರೇಟರ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರ ಹುದ್ದೆಗಳನ್ನು ತುಂಬಬೇಕು.
೯] ಗ್ರೇಡ್-೧ ಕಾರ್ಯದರ್ಶಿಗಳಿಂದ ಪಿ.ಡಿ.ಓ ಹುದ್ದೆಗೆ ರಾಜ್ಯಮಟ್ಟದಲ್ಲಿ ಕೊಡುವ ಮುಂಬಡ್ತಿಯನ್ನು ಕೈಬಿಟ್ಟು ಜಿಲ್ಲಾ ಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು.
೧೦] ಪ್ರತಿಯೊಂದು ಗ್ರಾಮ ಪಂಚಾಯತಿಗಳಿಗೆ ಲೆಕ್ಕ ಸಹಾಯಕ ಹುದ್ದೆಗಳನ್ನು ಸೃಷ್ಟಿಸಬೇಕು.
೧೧] ಬಿಲ್ ಕಲೆಕ್ಟರ್ ಮತ್ತು ಗುಮಾಸ್ತ ವೃಂದದಿAದ ಗ್ರೇಡ್-೨ ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗಳಿಗೆ ನೇಮಕಗೊಂಡ ನೌಕರರಿಗೆ ಕೆ.ಸಿ.ಎಸ್.ಆರ್. ೩೨೫ ನಿಯಮಾನುಸಾರ ಹಿಂದಿನ ಸೇವೆಯನ್ನು ಪರಿಗಣಿಸಿ ಹಳೆ ಪಿಂಚಣಿ ಜಾರಿ ಮಾಡಬೇಕು.
೧೨] ಗ್ರೇಡ್-೧ ಪಂಚಾಯತಿಗಳನ್ನು ಜನಸಂಖ್ಯೆಗೆ ಆಧರಿಸಿ ಗ್ರಾಮ ಪಂಚಾತಿಗಳನ್ನು ಮೇಲ್ದರ್ಜೆಗೆ ಏರಿಸಬೇಕು.
೧೩] ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗೆ ಶೇಕಡಾ ೬೦ ರಷ್ಟು ಸ್ಥಾನವನ್ನು ಗ್ರೇಡ್-೧ ಕಾರ್ಯದರ್ಶಿಗಳಿಗೆ ನೀಡಬೇಕು.

RELATED ARTICLES

LEAVE A REPLY

Please enter your comment!
Please enter your name here

- Advertisment -

ಜಾಹೀರಾತು

spot_img

Most Popular

Recent Comments