ದಾವಣಗೆರೆ -ಇಲ್ಲಿನ ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಸಿಪಿಐ ಕಾರ್ಯಕರ್ತರು ಆಗ್ರಹಿಸಿದರು.
ಸಿಪಿಐ ರಾಷ್ಟ್ರೀಯ ಮಂಡಳಿ ಕರೆ ಮೇರೆಗೆ ಸಿಪಿಐ ದಾವಣಗೆರೆ ಜಿಲ್ಲಾ ಮಂಡಳಿ ನೇತೃತ್ವದಲ್ಲಿ ಇಂದು ಮಹಾತ್ಮ ಗಾಂಧಿ ಸರ್ಕಲ್ ನಲ್ಲಿ ಸಿಪಿಐ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದ ನೇತೃತ್ವವನ್ನು ವಹಿಸಿ ಮಾತನಾಡಿದ ಸಿಪಿಐ ಜಿಲ್ಲಾ ಮಂಡಳಿ ಸಹ ಕಾರ್ಯದರ್ಶಿ ಕಾಂ ಆವರಗೆರೆ ಚಂದ್ರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರಜಾಪ್ರಭುತ್ವ ಸಂಸ್ಥೆಗಳ ಸ್ವಾಯತ್ತತೆ ಮತ್ತು ಉತ್ತರದಾಯಿತ್ವವನ್ನು ದುರ್ಬಲಗೊಳಿಸುತ್ತಿದೆ. ಚುನಾವಣಾ ಆಯೋಗವು ಸ್ವತಂತ್ರವಾಗಿ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕಾದ ಸಾಂವಿಧಾನಿಕ ಸಂಸ್ಥೆಯಾಗಿದೆ ಆದರೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ಖಾತೆಯಲ್ಲಿ ಕೇಂದ್ರ ಸರ್ಕಾರದ ಪ್ರಭಾವ ಹೆಚ್ಚಾಗಿರುವುದು ಆಯೋಗದ ಸ್ವಾತಂತ್ರ ಮತ್ತು ವಿಸ್ವಾರ್ಹತೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದ್ದು, ಕೇಂದ್ರ ಸರ್ಕಾರದ ಮೂಗು ತೂರಿಸುವಿಕೆಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಿ ಅರ್ಹ 13 ಕೋಟಿ ಮತದಾರರು ಮತದಾನದಿಂದ ವಂಚಿತರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಕಾಂ ಹೆಚ್ ಜಿ ಉಮೇಶ್,ಕಾಂ ಐರಣಿ ಚಂದ್ರು,ಕಾಂ ಕೆರನಹಳ್ಳಿ ರಾಜು ಮಾತನಾಡಿದರು.
ಜಿ ಯಲ್ಲಪ್ಪ,ವಿ ಲಕ್ಷ್ಮಣ, ಚಿನ್ನಪ್ಪ, ಶೇಖರ ನಾಯಕ, ರಮೇಶ್ ಸಿ ದಾಸರ, ಸರೋಜ, ಪುಷ್ಪ, ನಾಗಮ್ಮ, ಎ ತಿಪ್ಪೇಶ್, ಕೆ ಜಿ ಶಿವಮೂರ್ತಿ, ಜಯಪ್ಪ, ಸುರೇಶ್, ಶಾಗಲೆ ಶರಣಪ್ಪ, ಕೃಷ್ಣಪ್ಪ ಸೇರಿದಂತೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಸಿ ಮಾನವ ಸರಪಳಿ ನಿರ್ಮಿಸಿ ಸಿಪಿಐ ಪಕ್ಷದಿಂದ ಪ್ರತಿಭಟನೆ.
RELATED ARTICLES

